ನವದೆಹಲಿ : ಎಎಪಿ ನಾಯಕಿ ಸ್ವಾತಿ ಮಲಿವಾಲ್ ಅವರು ತಪ್ಪು ಪ್ರಮಾಣವಚನವನ್ನು ಓದಿದ ನಂತರ ‘ಇಂಕ್ವಿಲಾಬ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ ನಂತರ ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಘಟನೆ ನಡೆದಿದೆ.
ರಾಜ್ಯಸಭೆಯಲ್ಲಿ ಬುಧವಾರ ಮೂವರು ಹೊಸ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಸತ್ನಾಮ್ ಸಿಂಗ್ ಸಂಧು, ನಾರಾಯಣ್ ದಾಸ್ ಗುಪ್ತಾ ಮತ್ತು ಸ್ವಾತಿ ಮಲಿವಾಲ್ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಮತ್ತು ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ರಾಜ್ಯಸಭೆಯಲ್ಲಿ ಸಂಸತ್ ಸದಸ್ಯರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಆದಾಗ್ಯೂ, ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಎರಡು ಬಾರಿ ಪ್ರಮಾಣವಚನ ಸ್ವೀಕರಿಸುವಂತೆ ಹೇಳಿದ್ದಾರೆ.
ಎಎಪಿ ನಾಯಕಿ ಸ್ವಾತಿ ಮಲಿವಾಲ್ ರಾಜ್ಯಸಭೆಯಲ್ಲಿ ಪ್ರಮಾಣವಚನ ಓದಿದ ಬಳಿಕ ಇಂಕ್ವಿಲಾಬ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಆದರೆ ಈ ಪದವು ಪ್ರಮಾಣವಚನದಲ್ಲಿ ಇರಲಿಲ್ಲ. ಅವರು ಪ್ರಮಾಣ ವಚನದ ಭಾಗವಲ್ಲದ ಕೆಲವು ಪದಗಳನ್ನು ಬಳಸಿದ್ದಾರೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮತ್ತೊಮ್ಮೆ ಪ್ರಮಾಣವಚನ ಬೋಧಿಸಿದ್ದಾರೆ.