ಭುವನೇಶ್ವರ: ಒಡಿಶಾದ ಖುರ್ದಾ ರೋಡ್ ರೈಲು ನಿಲ್ದಾಣದಲ್ಲಿ ನವಜಾತ ಗಂಡು ಮಗುವನ್ನು ರಕ್ಷಿಸಲಾಗಿದೆ. ರೈಲಿನಲ್ಲಿದ್ದ ಕೆಲವು ಪ್ರಯಾಣಿಕರು ಬೋಗಿಯೊಂದರಲ್ಲಿ ನವಜಾತ ಶಿಶುವನ್ನು ಕಂಡು ಆರ್‌ಪಿಎಫ್‌ಗೆ ಮಾಹಿತಿ ನೀಡಿದ್ದಾರೆ.
ಪ್ರಯಾಣಿಕರು ಮಾಹಿತಿ ನೀಡಿದ ಕೂಡಲೇ ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ರೈಲಿನ ಸಾಮಾನ್ಯ ಬೋಗಿಯಿಂದ ನವಜಾತ ಶಿಶುವನ್ನು ರಕ್ಷಿಸಿದ್ದಾರೆ. ಆರ್‌ಪಿಎಫ್ ಸಿಬ್ಬಂದಿ ಮಗುವನ್ನು ರಕ್ಷಿಸಿ ಖುರ್ದಾ ಮಕ್ಕಳ ಕಲ್ಯಾಣ ಸಮಿತಿಯನ್ನು ಸಂಪರ್ಕಿಸಿದರು. ನಂತರ ನವಜಾತ ಶಿಶುವನ್ನು ಚೈಲ್ಡ್ ಲೈನ್ ಗೆ ಹಸ್ತಾಂತರಿಸಲಾಯಿತು.
ಪ್ರಾಥಮಿಕ ತನಿಖೆಯ ಪ್ರಕಾರ, ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿ ರೈಲಿನಲ್ಲಿ ಬಿಟ್ಟು ಹೋಗಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರ್‌ಪಿಎಫ್‌ನಿಂದ ಹೆಚ್ಚಿನ ತನಿಖೆ ನಡೆಯುತ್ತಿದೆ.