ಮೇಳಗಳಲ್ಲಿ ಹೆಣ್ಣುಭ್ರೂಣ ಹತ್ಯೆ ತಡೆಗಟ್ಟುವಿಕೆಗಾಗಿ ಪ್ರತಿಯೊಬ್ಬರಿಗೂ ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ 1994ರ ಕುರಿತು ಜಾಗೃತಿಯನ್ನು ನೀಡಲಾಗುತ್ತಿದ್ದು, ಭ್ರೂಣಲಿಂಗ ಪತ್ತೆಗೆ ಸಂಬಂಧಿಸಿದ ಯಾವುದೇ ಜಾಹೀರಾತುಗಳಿಗೆ 3 ವರ್ಷ ಜೈಲು ಶಿಕ್ಷೆ, ರೂ.10 ಸಾವಿರ ದಂಡ ಇದೆ ಎಂದು ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದ್ದಾರೆ.
ವೈದ್ಯರು ಭ್ರೂಣಲಿಂಗ ಪತ್ತೆ ಮಾಡಿದಲ್ಲಿ ಮೊದಲ ಅಪರಾಧಕ್ಕೆ 3 ವರ್ಷ ಜೈಲು ಶಿಕ್ಷೆ ರೂ.10 ಸಾವಿರ ದಂಡ ಮತ್ತು 2ನೇ ಬಾರಿ ಅಪರಾಧಕ್ಕೆ 5 ವರ್ಷ ಜೈಲು ಶಿಕ್ಷೆ ರೂ.50 ಸಾವಿರ ದಂಡವಿದೆ. ಅಲ್ಲದೇ ಗರ್ಭಿಣಿ ಮಹಿಳೆಗೆ ಕುಟುಂಬದ ಸದಸ್ಯರು ಭ್ರೂಣಲಿಂಗ ಪತ್ತೆಗೆ ಒತ್ತಾಯಿಸಿದರೆ. ಮೊದಲ ಅಪರಾಧಕ್ಕೆ 3 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ.ದಂಡ, ಪುನಃ 2ನೇ ಬಾರಿ ಭ್ರೂಣಲಿಂಗ ಪತ್ತೆ ಮಾಡಿಸಿದಲ್ಲಿ 5 ವರ್ಷ ಜೈಲು ಶಿಕ್ಷೆ ರೂ.1 ಲಕ್ಷ ದಂಡವಿದೆ ಎಂದಿದ್ದಾರೆ.
ಆಯುಷ್ಮಾನ್ ಭಾರತ ಹೆಲ್ತ್ ಅಕೌಂಟ್ ಮಾಡಿಸುವ ಮೂಲಕ ದೇಶದ ಯಾವುದೆ ಭಾಗದಲ್ಲಿ ಚಿಕಿತ್ಸೆಗೆ ತೆರಳಿದರೂ ಸಹ ಸಕಾಲದಲ್ಲಿ ಚಿಕಿತ್ಸೆಯನ್ನು ನೀಡಲು ಸಹಕಾರಿಯಾಗಿದ್ದು, ಪ್ರತಿಯೊಬ್ಬರೂ ತಪ್ಪದೇ ನೋಂದಣಿ ಮಾಡಿಸಬೇಕು ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಆರೋಗ್ಯ ಮೇಳಗಳ ಯಶಸ್ವಿಗಾಗಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಮತ್ತು ತಂಡ ಜಿಲ್ಲಾ ಕಾರ್ಯಕ್ರಮ ಅನುಷ್ಟಾನ ಅಧಿಕಾರಿಗಳು ಹಾಗೂ ತಾಲ್ಲೂಕ ಆರೋಗ್ಯ ಅಧಿಕಾರಿಗಳು ಸೂಕ್ತ ಮೇಲ್ವಿಚಾರಣೆ ಕೈಗೊಳ್ಳಲಾಗುತ್ತಿದ್ದು, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಮಾಹಿತಿ ನೀಡುತ್ತಿದ್ದು, ಆರೋಗ್ಯ ಶಿಕ್ಷಣಾಧಿಕಾರಿಗಳು ಆರೋಗ್ಯ ಜಾಗೃತಿ ಕಾರ್ಯ ಕೈಗೊಳ್ಳುತ್ತಿದ್ದಾರೆ. ಸಾರ್ವಜನಿಕರು ಮೇಳಗಳಲ್ಲಿ ಭಾಗವಹಿಸಿ ಆರೋಗ್ಯಯುತ ಬಳ್ಳಾರಿ ಜಿಲ್ಲೆಯನ್ನಾಗಿಸಲು ಸಹಕರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಕೋರಿದ್ದಾರೆ.