ಭಾರತ ಸರ್ಕಾರ ಸಾರ್ವಜನಿಕ ಆರೋಗ್ಯದ ಮಾಹಿತಿಯನ್ನು ಡಿಜಿಟಲೀಕರಣಗೊಳಿಸಿ ಪ್ರತಿ ವ್ಯಕ್ತಿಯ ಆರೋಗ್ಯದ ಮಾಹಿತಿಯನ್ನು ಒಂದೇ ಸೂರಿನಡಿ ದೊರಕಿಸಿ ಆರೋಗ್ಯದ ಸೌಲಭ್ಯಗಳು ಸುಲಭವಾಗಿ ದೊರಕುವಂತೆ ಮಾಡುವ ಮಹತ್ತರ ಯೋಜನೆಯಾದ ಆಭಾ(ABHA: Ayushman Bharath Health Account) ಕಾರ್ಡ್ ಯೋಜನೆಯನ್ನು ಆರಂಭಿಸಿದೆ.
ಈ ಕಾರ್ಡ್ ಹೊಂದಿದ ವ್ಯಕ್ತಿಗಳು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯಬಹುದು. ಚಿಕಿತ್ಸೆಯ ಮಾಹಿತಿಯನ್ನು ದೇಶದ ಯಾವುದೇ ಭಾಗದಲ್ಲಿ ಆನ್ ಲೈನ್ ಮೂಲಕ ಪಡೆಯಬಹುದಾಗಿರುತ್ತದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಆಭಾ ಕಾರ್ಡ್ ನೋಂದಣಿ ಮಾಡಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.