ಬೆಂಗಳೂರು : ಉದ್ಯಮಿಗೆ 5 ಕೋಟಿ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಸಿಬಿ ಇದೀಗ ಅಭಿನವ ಹಾಲಶ್ರೀ ಬಂಧನಕ್ಕೆ ಬಲೆ ಬೀಸಿದೆ.
ಅಭಿನವ ಹಾಲಶ್ರೀ ಹೈದರಾಬಾದ್ ನಲ್ಲಿ ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಸಿಸಿಬಿ ಪೊಲೀಸರು ಬಂಧಿಸಲು ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಒಂದು ವೇಳೆ ಸ್ವಾಮೀಜಿ ಹೈದರಾಬಾದ್ ನಲ್ಲಿ ಇರುವುದು ಕನ್ಫರ್ಮ್ ಆಗಿದ್ದರೆ ಇಂದು ಅಥವಾ ನಾಳೆ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಹಾಕಿಕೊಳ್ಳಲಿದ್ದಾರೆ. ಅಲ್ಲದೇ ಸ್ವಾಮೀಜಿ ಮೈಸೂರಿನಲ್ಲಿ ಕಾರು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದರು. ಪೊಲೀಸರ ಕಣ್ಣಿಗೆ ಮಣ್ಣೆರಚಲು ಕಾರಿನ ನಂಬರ್ ಪ್ಲೇಟ್ ತೆಗೆದು ಪ್ರಯಾಣಿಸಿದ್ದರು ಎಂದು ಹೇಳಲಾಗಿದೆ.
ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ 5 ಕೋಟಿ ವಂಚನೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಅಭಿನವ ಹಾಲಶ್ರೀ ಸ್ವಾಮೀಜಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ವಂಚನೆ ಪ್ರಕರಣದಲ್ಲಿ ಎ3 ಆರೋಪಿಯಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮೀನಿಗಾಗಿ ಹಾಲಶ್ರೀ ಪರ ವಕೀಲರು ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿದೆ.
ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಎಂಬುವವರಿಗೆ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ಬರೋಬ್ಬರಿ 5 ಕೋಟಿ ವಂಚಿಸಿತ್ತು. ಕಬಾಬ್ ಮಾರುವ ವ್ಯಕ್ತಿ, ಸಲೂನ್ ಮೇಕಪ್ ಮ್ಯಾನ್ ಹಾಗೂ ಇನ್ನೋರ್ವನಿಗೆ ಆರ್.ಎಸ್.ಎಸ್ ಮುಖಂಡನ ವೇಷ, ಬಿಜೆಪಿ ಕೇಂದ್ರ ನಾಯಕರ ವೇಷ ತೊಡಿಸಿ ನಾಟಕವಾಡಲು ರಂಗತಾಲೀಮು ನಡೆಸಿ ಉದ್ಯಮಿಯನ್ನು ವಂಚಿಸಿದ್ದರು.