
ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಇಂದು 30ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬವನ್ನು ಕುಟುಂಬ ಹಾಗೂ ಸ್ನೇಹಿತರೊಂದಿಗೆ ಗ್ರಾಂಡ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ.
2019ರಲ್ಲಿ ತೆರೆ ಕಂಡ ‘ಅಮರ್’ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅಭಿಷೇಕ್ ಅಂಬರೀಶ್ ಇತ್ತೀಚೆಗೆ ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿದ್ದಾರೆ.
ನಟ ಅಭಿಷೇಕ್ ಅಂಬರೀಶ್ ಅವರ ಮುಂಬರುವ ಸಿನಿಮಾಗಳು ‘ಬ್ಯಾಡ್ ಮ್ಯಾನರ್ಸ್’ ಹಾಗೂ ‘ಖಾಲಿ’, ಈ ಎರಡು ಚಿತ್ರಗಳು ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇಂದು ಬ್ಯಾಡ್ ಮ್ಯಾನರ್ಸ್ ಚಿತ್ರ ತಂಡ ಅಭಿಷೇಕ್ ಅಂಬರೀಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ವಿಡಿಯೋ ಹಾಡೊಂದನ್ನು ಬಿಡುಗಡೆ ಮಾಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಲಿದೆ.