ಬೆಂಗಳೂರು : ದಿ.ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಹೌದು, ಅದಕ್ಕೆ ಕಾರಣ ಅಭಿಷೇಕ್ ಅಂಬರೀಶ್ ತಂದೆಯಾಗುತ್ತಿದ್ದಾರೆ.
ಅಭಿಷೇಕ್ ಅಂಬರೀಶ್ ಪತ್ನಿ ಗರ್ಭಿಣಿಯಾಗಿದ್ದು, ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ . ಈ ಬಗ್ಗೆ ಕುಟುಂಬದ ಮೂಲಗಳು ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ ಸದ್ಯದಲ್ಲೇ ಅವಿವಾ ಸೀಮಂತ ಕಾರ್ಯ ಕೂಡ ನೆರವೇರಲಿದೆ ಎಂದು ಹೇಳಲಾಗುತ್ತಿದೆ.
ಕಳೆದ ವರ್ಷ ಜೂ.5 ರಂದು ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಪುತ್ರ ನಟ ಅಭಿಷೇಕ್ ಫ್ಯಾಷನ್ ಉದ್ಯಮಿ ಅವಿವಾ ಬಿದ್ದಪ್ಪ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.