
ಮಂಡ್ಯ: ‘ಜನ ಬಯಸಿದರೆ ರಾಜಕಾರಣಕ್ಕೆ ಬರುತ್ತೇನೆ. ರಾಜಕೀಯಕ್ಕೆ ಬರುವ ಬಗ್ಗೆ ವೈಯಕ್ತಿಕವಾಗಿ ನನಗೆ ಇಷ್ಟವಿಲ್ಲ. ಒಂದು ವೇಳೆ ನಾನು ರಾಜಕೀಯ ಪ್ರವೇಶಿಸಿದರೆ ತಂದೆಯವರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ.’
ಹೀಗೆಂದು ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಹೇಳಿದ್ದಾರೆ. ಮದ್ದೂರು ತಾಲೂಕಿನ ಹುಳಗನಹಳ್ಳಿಯಲ್ಲಿ ಮಾತನಾಡಿದ ಅವರು, ನನಗೆ ಚಿತ್ರರಂಗದ ಮೇಲೆ ಆಸೆ ಇದೆ. ರಾಜಕಾರಣಕ್ಕೆ ಬರುವ ಬಗ್ಗೆ ಆಸಕ್ತಿ ಇಲ್ಲ ಎಂದು ತಿಳಿಸಿದ್ದಾರೆ.
ಜಿಲ್ಲೆಯ ಜನರು ಮತ್ತು ನಮ್ಮ ತಂದೆಯವರ ಅಭಿಮಾನಿಗಳು, ಬೆಂಬಲಿಗರು ಇಷ್ಟಪಟ್ಟಲ್ಲಿ ಮಾತ್ರ ರಾಜಕಾರಣಕ್ಕೆ ಬರಬೇಕೆ? ಬೇಡವೇ? ಎಂಬುದರ ಬಗ್ಗೆ ಆಲೋಚಿಸಿ ತೀರ್ಮಾನಿಸುತ್ತೇನೆ. ಒಂದು ವೇಳೆ ರಾಜಕಾರಣಕ್ಕೆ ಬಂದರೆ ತಂದೆಯವರ ಕ್ಷೇತ್ರ ಮದ್ದೂರಿನಿಂದ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ.