alex Certify ‘ಹೋಟೆಲ್ ಮ್ಯಾನೇಜ್ಮೆಂಟ್’ ಕ್ಷೇತ್ರದಲ್ಲಿ ವಿಫುಲ ಅವಕಾಶ, ವಿದ್ಯಾರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹೋಟೆಲ್ ಮ್ಯಾನೇಜ್ಮೆಂಟ್’ ಕ್ಷೇತ್ರದಲ್ಲಿ ವಿಫುಲ ಅವಕಾಶ, ವಿದ್ಯಾರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಹೋಟೆಲ್ ಮ್ಯಾನೇಜ್ಮೆಂಟ್ ಕ್ಷೇತ್ರದಲ್ಲಿ ಹಲವಾರು ಉದ್ಯೋಗ ಅವಕಾಶಗಳಿದ್ದು, ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ನಿಷ್ಠೆಯಿಂದ ಕಾರ್ಯ ನಿರ್ವಹಿಸಿ, ಬದುಕನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಗಾರಿಕಾ ಕೇಂದ್ರ, ಕೌಶಲ್ಯಾಭಿವೃದ್ಧಿ ಇಲಾಖೆ, ಪ್ರಧಾನಮಂತ್ರಿ ಖನಿಜ ಕ್ಷೇತ್ರ ಕಲ್ಯಾಣ ಯೋಜನೆ ಹಾಗೂ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್ನ ಅಬ್ದುಲ್ ನಜೀರ್ಸಾಬ್ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ನಡಿ 60 ದಿನದ ಕೌಶಲ್ಯ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಯುವ ಪೀಳಿಗೆಯು ಕೌಶಲ್ಯ ಚಟುವಟಿಕೆಗಳಲ್ಲಿ ತರಬೇತಿ ಪಡೆದರೆ, ಹೋಟೆಲ್ ಮ್ಯಾನೇಜ್ಮೆಂಟ್ ಸೇರಿದಂತೆ ವಿವಿಧ ರಂಗಗಳಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಬಳ್ಳಾರಿ ಚೇಂಬರ್ ಕೌಶಲ್ಯಾಭಿವೃದ್ಧಿ ಕೇಂದ್ರವು ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ನಡಿ 60 ದಿನದ ಕೌಶಲ್ಯ ತರಬೇತಿ ನೀಡಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ವಿವಿಧ ಹೆಸರಾಂತ ಹೋಟೆಲ್ಗಳಲ್ಲಿ ಸಂದರ್ಶನದ ಮೂಲಕ ಉದ್ಯೋಗ ಕಲ್ಪಿಸಿದೆ. ಆಯ್ಕೆಯಾದವರು ಸಾಧನೆಯ ಹಾದಿ ಮುಂದುವರೆಸಬೇಕು ಎಂದು ಆಶಿಸಿದರು.

ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ಒಂದು ದೇಶ ಅಭಿವೃದ್ಧಿಯಾಗಲು ಮೂರು ಪ್ರಮುಖ ಕ್ಷೇತ್ರಗಳಾದ ಕೃಷಿ, ಕೈಗಾರಿಕಾ ಮತ್ತು ಸೇವಾ ವಲಯಗಳ ಪಾತ್ರ ಬಹುಮುಖ್ಯವಾಗಿದ್ದು, ಅದರಲ್ಲಿ ಸೇವಾ ವಲಯದಿಂದ ಯುವ ಪೀಳಿಗೆಗೆ ಉದ್ಯೋಗಗಳು ಹೆಚ್ಚಾಗಿ ಸೃಷ್ಟಿಯಾಗುತ್ತವೆ ಎಂದು ಅಭಿಪ್ರಾಯ ಪಟ್ಟರು.

ಹೋಟೆಲ್ ಮ್ಯಾನೇಜ್ಮೆಂಟ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಹೆಚ್ಚಳ

ಈ ಭಾಗದಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಹೆಚ್ಚಾಗಿದ್ದು, ಆಸಕ್ತರು ಹೋಟೆಲ್ ಮ್ಯಾನೇಜ್ಮೆಂಟ್ ತರಬೇತಿ ಪಡೆದು ಉದ್ಯೋಗವಕಾಶದ ಸದುಪಯೋಗ ಪಡೆದುಕೊಳ್ಳಬೇಕು. ಕೆಲಸವನ್ನು ಶ್ರದ್ಧೆಯಿಂದ ಮಾಡಿದರೆ ಜೀವನದಲ್ಲಿ ಉತ್ತುಂಗ ಸ್ಥಾನಕ್ಕೆ ತಲುಪುವಿರಿ ಎಂದು ಹೇಳಿದರು.

ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ನ ಕೌಶಲ್ಯ ಪೂರ್ಣ ತರಬೇತಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಅಂತಾರಾಷ್ಟ್ರೀಯ ದರ್ಜೆಯ ಹೋಟೆಲ್ಗಳಾದ ಎವಾಲ್ವ್ ಬ್ಲಾಕ್, ವಿಜಯಶ್ರೀ ಹೆರಿಟೇಜ್, ಹೋಟೆಲ್ ಪೆÇೀಲಾ ಪ್ಯಾರಡೈಸ್, ರಾಯಲ್ ಆರ್ಕಿಡ್, ಶಿವಲೀಲಾ ಪ್ಯಾಲೇಸ್ ಹೋಟೆಲ್ಗಳಲ್ಲಿ ಉದ್ಯೋಗವಕಾಶ ಲಭಿಸಿವೆ.ತರಬೇತಿ ಪಡೆದ ಅಭ್ಯರ್ಥಿಗಳಿಗೆ ಇದೇ ವೇಳೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...