ಬೆಂಗಳೂರು : ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಹಾಗೂ ಕರ್ನಾಟಕದ ಸಿಎಂ ಸಿದ್ದರಾಮಯ್ಯ ವಿರುದ್ಧ ನಿಂದನಾತ್ಮಕ ಪೋಸ್ಟ್ ಹಾಕಿದ್ದ ಓರ್ವನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಆರೋಪಿಯನ್ನು ಈಶ್ವರಪ್ಪ ಮುನಿಯಪ್ಪ ಎಂದು ಗುರುತಿಸಲಾಗಿದ್ದು, ಆತನಿಗಾಗಿ ಸೈಬರ್ ಕ್ರೈಮ್ ಪೊಲೀಸರು ಬಲೆ ಬೀಸಿದ್ದಾರೆ.
ಈತ ಮುಖ್ಯಮಂತ್ರಿಗಳಷ್ಟೇ ಅಷ್ಟೇ ಅಲ್ಲದೇ ಡಿಕೆ ಶಿವಕುಮಾರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವ ಪ್ರಿಯಾಂಕ್ ಖರ್ಗೆ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಬಗ್ಗೆ ನಿಂದನಾತ್ಮಕ ಪೋಸ್ಟ್ ಹಾಕಿ ಕಮೆಂಟ್ ಮಾಡುತ್ತಿದ್ದನು ಎನ್ನಲಾಗಿದೆ. ವೈಟ್ ಫೀಲ್ಡ್ ಸೈಬರ್ ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಮ್ ಪೊಲೀಸ್ ಠಾಣೆ ಪೊಲೀಸರು ಈತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.