ಹೊಸಪೇಟೆ: ಎಸಿ ಸ್ಪೋಟಗೊಂಡು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ಪತಿ, ಪತ್ನಿ ಮತ್ತು ಇಬ್ಬರು ಮಕ್ಕಳು ಮನೆಯಲ್ಲಿಯೇ ಮೃತಪಟ್ಟಿದ್ದಾರೆ.
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಮರಿಯಮ್ಮನಹಳ್ಳಿಯ ರಾಘವೇಂದ್ರ ಶೆಟ್ಟಿ ಮನೆಯಲ್ಲಿ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎಸಿ ಸ್ಫೋಟಗೊಂಡು ದುರ್ಘಟನೆ ಸಂಭವಿಸಿದೆ.
ಸೆಖೆ ಇದ್ದ ಕಾರಣ ಎಸಿ ಆನ್ ಮಾಡಿಕೊಂಡು ಮಲಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಪೋಟಗೊಂಡಿದೆ, ಇಡೀ ಮನೆಗೆ ಭಾರೀ ಬೆಂಕಿ ತಗುಲಿ ಒಂದೇ ಕುಟುಂಬದ ನಾಲ್ವರು ಪ್ರಾಣ ಬಿಟ್ಟಿದ್ದಾರೆ.
ವೆಂಕಟ್ ಪ್ರಶಾಂತ್(42), ಡಿ. ಚಂದ್ರಕಲಾ(38), ಆರ್ದ್ವೀಕ್(16), ಪ್ರೇರಣಾ(8) ಮೃತಪಟ್ಟವರು ಎನ್ನಲಾಗಿದೆ. ಮರಿಯಮ್ಮನಹಳ್ಳಿ ಪೊಲೀಸರು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.