ಶಿವಮೊಗ್ಗ: ಹುಣಸೋಡು ಸ್ಫೋಟ ಪ್ರಕರಣ ಮರೆಯುವ ಮುನ್ನವೇ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದ್ದು, ಜಿಲ್ಲೆಯ ಜನರು ಆತಂಕಕ್ಕೀಡಾಗಿದ್ದಾರೆ.
ತಾಳಗುಪ್ಪದಲ್ಲಿನ ರಂಗಪ್ಪನ ಗುಡ್ಡದ ಬಳಿ ಹೈಟೆನ್ಶನ್ ವಿದ್ಯುತ್ ಲೈನ್ ಗೆ ಮರ ತಾಗಿ ಭಾರಿ ಸ್ಫೋಟ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬೃಹತ್ ಮರಗಳು ಬೆಂಕಿಗಾಹುತಿಯಾಗಿವೆ.
ಹೊಸ ದಾಖಲೆಗೆ ಪಾತ್ರರಾದ ಬಾಬರ್ ಅಜಮ್ ಹಾಗೂ ಮೊಹಮ್ಮದ್ ರಿಜ್ವಾನ್
ಈ ಭಾಗದಲ್ಲಿ ಕೆಪಿಟಿಸಿಎಲ್ ಇಲಾಖೆಯ ಹೈಟೆನ್ಶನ್ ಲೈನ್ ಹಾದು ಹೋಗಿದ್ದು, ಅಕೇಶಿಯಾ ಮರಗಳಿಗೆ ತಾಗಿ ಈ ಸ್ಫೋಟ ಸಂಭವಿಸಿದೆ ಎನ್ನಲಾಗುತ್ತಿದೆ. ಈ ಪ್ರದೇಶದಲ್ಲಿ ಆಗಾಗ ಇಂಥದ್ದೇ ವಿದ್ಯುತ್ ಅವಘಡಗಳು ಸಂಭವಿಸುತ್ತಿದ್ದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ನೂರಾರು ಕುಟುಂಬಗಳು ಆತಂಕದಲ್ಲಿಯೇ ಕಾಲ ಕಳೆಯುವ ಸ್ಥಿತಿ ಎದುರಾಗಿದೆ. ಇಲಾಖೆಯ ದಿವ್ಯ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.