ಬೆಂಗಳೂರು: ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಎಇ ಹನುಮಂತಪ್ಪ ಎಸಿಬಿ ಬಲೆಗೆ ಬಿದ್ದಿದ್ದಾರೆ. ಬೆನ್ಸನ್ ಟೌನ್ ಬೆಸ್ಕಾಂ ಕಚೇರಿಯಲ್ಲಿ ಅವರು 1.30 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ
ಅಪಾರ್ಟ್ಮೆಂಟ್ ಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅವರು ಲಂಚ ಸ್ವೀಕರಿಸುತ್ತಿದ್ದರು. ಅಕ್ಟೋಬರ್ ನಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, 3 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ನಂತರ 1.60 ಲಕ್ಷ ರೂ.ಗೆ ಡೀಲ್ ಕುದುರಿಸಿದ್ದರು. ಇಂದು 1.30 ಲಕ್ಷ ರೂ. ಲಂಚ ಸ್ವೀಕರಿಸುವಾಗ ಬೆಸ್ಕಾಂ ಎಇ ಹನುಮಂತಪ್ಪನನ್ನು ಎಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೇಸು ದಾಖಲಿಸಿಕೊಂಡು ವಿಚಾರಣೆ ನಡೆಸಲಾಗಿದೆ.