ಚಿತ್ರದುರ್ಗ: ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗದ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ಎ.ಡಿ. ತೋಟಯ್ಯ ಬಲೆಗೆ ಬಿದ್ದಿದ್ದಾರೆ.
ಕೃಷಿ ಹೊಂಡ ನಿರ್ಮಾಣ ಸಹಾಯಧನ ನೀಡಲು ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಅವರು ಬಲೆಗೆ ಬಿದ್ದಿದ್ದಾರೆ. 2.80 ಲಕ್ಷ ರೂ. ಸಹಾಯಧನ ನೀಡಲು 1.40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಸರ್ಕಾರದ ಸಹಾಯಧನದಲ್ಲಿ ಶೇಕಡ 50 ರಷ್ಟು ಲಂಚ ಸ್ವೀಕರಿಸುತ್ತಿದ್ದರು. ಅರಬಘಟ್ಟ ಗ್ರಾಮದ ರೈತ ಕೃಷ್ಣನಾಯ್ಕ್ ಅವರಿಂದ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ. ಎಸಿಬಿ ಡಿಎಸ್ಪಿ ಉಮೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.