ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ 9 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಡಿಎ ಅಧಿಕಾರಿಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಧ್ಯವರ್ತಿಗಳು, ಏಜೆಂಟರ ಮೂಲಕ ಭ್ರಷ್ಟಾಚಾರ, ಅವ್ಯವಹಾರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಏಕಕಾಲದಲ್ಲಿ ಮಧ್ಯವರ್ತಿಗಳು, ಏಜೆಂಟರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಎಸಿಬಿ ಎಸ್.ಪಿ. ಉಮಾ ಪ್ರಶಾಂತ್ ನೇತೃತ್ವದಲ್ಲಿ 100 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಚಾಮರಾಜಪೇಟೆಯ ಬಿ.ಎನ್. ರಘು, ಆರ್.ಟಿ. ನಗರ ಮನೋರಾಯನಪಾಳ್ಯದ ಮೋಹನ್, ದೊಮ್ಮಲೂರಿನ ಮನೋಜ್, ಆರ್.ಆರ್. ನಗರದ ತೇಜು, ಮಲ್ಲತ್ತಹಳ್ಳಿಯ ಮುನಿರತ್ನ ಅಲಿಯಾಸ್ ರತ್ನವೇಲು, ಮುದ್ದಿನ ಪಾಳ್ಯದ ಅಶ್ವತ್ಥ್ ಹಾಗೂ ಚಿಕ್ಕಹನುಮಯ್ಯ, ಚಾಮುಂಡೇಶ್ವರಿ ನಗರದ ರಾಮ, ಲಕ್ಷ್ಮಣ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.