ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಎಸ್ ಅಧಿಕಾರಿ ಡಾ. ಸುಧಾ ಆಪ್ತರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಸುಧಾ ಅವರ ಆಪ್ತರು ಮತ್ತು ಸಂಬಂಧಿಕರ ಮನೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗಷ್ಟೇ ಸುಧಾ ಅವರ ನಿವಾಸ, ಕಚೇರಿ ಮತ್ತು ಸಂಬಂಧಿತ ಸ್ಥಳಗಳ ಮೇಲೆ ಹಾಗೂ ಆಪ್ತರ ನಿವಾಸದ ಮೇಲೆ ದಾಳಿ ಮಾಡಿದ್ದ ಎಸಿಬಿ ಅಧಿಕಾರಿಗಳು ಅಪಾರ ಪ್ರಮಾಣದ ಆಸ್ತಿ, ಚಿನ್ನಾಭರಣ ಸಂಗ್ರಹಿಸಿರುವುದನ್ನು ಪತ್ತೆ ಮಾಡಿದ್ದರು. ಇದರ ಮುಂದುವರೆದ ಭಾಗವಾಗಿ ಮತ್ತೆ ದಾಳಿ ಮಾಡಲಾಗಿದೆ ಎಂದು ಹೇಳಲಾಗಿದೆ.