ಗದಗ: ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಕೆಲಸ ಕೊಡಿಸುವುದಾಗಿ ಮಹಿಳೆಯೊಬ್ಬರಿಂದ ಹಣ ಪಡೆಯುತ್ತಿದ್ದ ಸಂದರ್ಭದಲ್ಲೇ ಬಿಜೆಪಿ ಮುಖಂಡನನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಬಿಜೆಪಿ ಜಿಲ್ಲಾ ಮುಖಂಡ ರಮೇಶ್ ಸಜ್ಜಗಾರ ಬಂಧಿತ ವ್ಯಕ್ತಿ ಎಂದು ಹೇಳಲಾಗಿದೆ. ಡಂಬಳ ನಿವಾಸಿ ಈರಯ್ಯ ಅವರ ಪತ್ನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಕೆಲಸ ಕೊಡಿಸುವುದಾಗಿ 1 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ರಮೇಶ್ ಜಿಲ್ಲಾಡಳಿತ ಭವನದ ಸಮೀಪದ ಹೋಟೆಲ್ ನಲ್ಲಿ ಮಹಿಳೆಯಿಂದ 90 ಸಾವಿರ ರೂಪಾಯಿ ಪಡೆಯುತ್ತಿದ್ದ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.
ಗದಗ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಖಾಸಗಿ ವ್ಯಕ್ತಿಯೊಬ್ಬರ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.