alex Certify ಅಕ್ರಮ ಆಸ್ತಿಗಳಿಕೆ ಆರೋಪ: ಅಧಿಕಾರಿಗೆ ಎಸಿಬಿ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ ಆಸ್ತಿಗಳಿಕೆ ಆರೋಪ: ಅಧಿಕಾರಿಗೆ ಎಸಿಬಿ ಶಾಕ್

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ನಾಗರಾಜಪ್ಪ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ದಾಳಿ ನಡೆಸಿದ ವೇಳೆ ಮಹತ್ವದ ದಾಖಲಾತಿಗಳು ಪತ್ತೆಯಾಗಿವೆ. ಮಾಗಡಿ ರಸ್ತೆಯ ಸನ್ ಪ್ಲವರ್ ಅಪಾರ್ಟ್ಮೆಂಟ್ ನಲ್ಲಿ ಅವರು ಫ್ಲಾಟ್ ಹೊಂದಿದ್ದಾರೆ. ವಿಜಯನಗರದ ಎಂಸಿ ಲೇಔಟ್ ನಲ್ಲಿ ವಾಸದ ಮನೆ, ಕಾರ್, ಬೈಕ್, 26 ಸಾವಿರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು, ಬೇನಾಮಿ ಹೆಸರಿನ ಖಾತೆಗಳಲ್ಲಿ 29.40 ಲಕ್ಷ ರೂಪಾಯಿ ಠೇವಣಿ ಪತ್ತೆಯಾಗಿದ್ದು, ದಾಖಲಾತಿ ಪರಿಶೀಲನೆ ಕಾರ್ಯ ಮುಂದುವರೆದಿದೆ. ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...