
ಬೆಂಗಳೂರು: ಕೆಎಎಸ್ ಅಧಿಕಾರಿ ಡಾ. ಬಿ. ಸುಧಾ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಆಡಳಿತಾಧಿಕಾರಿಯಾಗಿರುವ ಸುಧಾ ಅವರ ಕೊಡಿಗೇನಹಳ್ಳಿಯಲ್ಲಿರುವ ನಿವಾಸದ ಮೇಲೆ ದಾಳಿ ಮಾಡಲಾಗಿದೆ.
ಇದರೊಂದಿಗೆ ಯಲಹಂಕದಲ್ಲಿರುವ ಫ್ಲಾಟ್, ಬ್ಯಾಟರಾಯನಪುರದ ಮನೆ, ಬಿಇಎಂಎಲ್ ನಲ್ಲಿರುವ ನಿವಾಸ, ಶಾಂತಿನಗರದಲ್ಲಿರುವ ಕಚೇರಿ ಹಾಗೂ ಉಡುಪಿ ಜಿಲ್ಲೆಯ ಹೆಬ್ರಿಯ ತಂಕಬಟ್ಟಿನ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಏಕ ಕಾಲದಲ್ಲಿ ಆರು ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಅವರು ಈ ಹಿಂದೆ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಭೂಸ್ವಾಧೀನಾಧಿಕಾರಿ ಆಗಿದ್ದ ಸುಧಾ ಅವರು ಅಕ್ರಮ ಆಸ್ತಿ ಗಳಿಕೆ, ಅವ್ಯವಹಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಎಸಿಬಿಯಲ್ಲಿ ದೂರು ದಾಖಲಾಗಿದ್ದು, ಅವರಿಗೆ ಸೇರಿದ ಮನೆಗಳು, ಫ್ಲಾಟ್, ಕಚೇರಿ, ಅವರ ಪರಿಚಯಸ್ಥರ ಮನೆಗಳ ಮೇಲೆಯೂ ದಾಳಿ ಮಾಡಿ ಪರಿಶೀಲಿಸಲಾಗಿದೆ ಎಂದು ಹೇಳಲಾಗಿದೆ.