ಶಿವಮೊಗ್ಗ: ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷಿ ಅಧಿಕಾರಿ ರುದ್ರೇಶಪ್ಪ ಅವರ ಜಾಮೀನು ಅರ್ಜಿಯನ್ನು ಶಿವಮೊಗ್ಗ ನ್ಯಾಯಾಲಯ ವಜಾಗೊಳಿಸಿದೆ.
ಶಿವಮೊಗ್ಗದ ಒಂದನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದೆ. ನ್ಯಾಯಾಂಗ ಬಂಧನದಲ್ಲಿರುವ ರುದ್ರೇಶಪ್ಪ ಡಿಸೆಂಬರ್ 7 ರವರೆಗೆ ಜೈಲಿನಲ್ಲಿ ಕಾಲ ಕಳೆಯಬೇಕಿದೆ ಎಂದು ಹೇಳಲಾಗಿದೆ.
ಗದಗ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಾಗಿದ್ದ ರುದ್ರೇಶಪ್ಪ ಆದಾಯಕ್ಕಿಂತ ಸುಮಾರು ಶೇ. 400 ರಷ್ಟು ಅಧಿಕ ಅಕ್ರಮ ಆಸ್ತಿ ಗಳಿಸಿದ್ದು, ದಾಳಿಯ ವೇಳೆ ಅವರ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನ, ನಗದು ಹಾಗೂ ಆಸ್ತಿ ದಾಖಲೆ ವಶಕ್ಕೆ ಪಡೆಯಲಾಗಿದೆ. ಅವರು ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನು ಅರ್ಜಿ ವಜಾಗೊಂಡ ಹಿನ್ನಲೆಯಲ್ಲಿ ಜೈಲಲ್ಲೇ ಉಳಿಯುವಂತಾಗಿದೆ.