ಕಲಬುರ್ಗಿ: ಎಸಿಸಿ ಸಿಮೆಂಟ್ ಕಾರ್ಖಾನೆ ಡೆಪ್ಯೂಟಿ ಮ್ಯಾನೇಜರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟನದಲ್ಲಿ ನಡೆದಿದೆ.
ರಮೇಶ್ ಪವಾರ್ (47) ಆತ್ಮಹತ್ಯೆಗೆ ಶರಣಾದವರು. ಮೃತ ರಮೇಶ್ ಪವಾರ್ ಚಿತ್ತಾಪುರ ಮಾಜಿ ಶಾಸಕ ದಿ.ವಾಲ್ಮಿಕಿ ನಾಯಕ್ ಅವರ ಅಳಯ. ವಾಡಿ ಪಟ್ಟಣದ ಎಸಿಸಿ ಕಾಲೋನಿಯ ತನ್ನ ಮನೆಯಲ್ಲಿ ರಮೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅದಾನಿ ಗ್ರೂಪ್ ಮಾಲಿಕತ್ವದಲ್ಲಿರುವ ಎಸಿಸಿ ಸಿಮೆಂಟ್ ಕಾರ್ಖಾನೆ ಇದಾಗಿದೆ. ಕಾರ್ಖಾನೆ ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರಮೇಶ್ ಪವಾರ್ ಸಾವಿಗೂ ಮುನ್ನ ವಿಡಿಯೋ ರೆಕಾರ್ಡ್ ಮಾಡಿಟ್ಟಿದ್ದು, ಹಿರಿಯ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದಾರೆ. ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.