alex Certify ಅಚ್ಚೇ ದಿನ್ ಬಂತಾ..15 ಲಕ್ಷ ಹಣ ಹಾಕಿದ್ರಾ ? : ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಚ್ಚೇ ದಿನ್ ಬಂತಾ..15 ಲಕ್ಷ ಹಣ ಹಾಕಿದ್ರಾ ? : ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ

ಬೆಂಗಳೂರು : ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇನೆ ಎಂದು ಹೇಳಿದ್ದ ಪ್ರಧಾನಿ ಮೋದಿ ಉದ್ಯೋಗ ಸೃಷ್ಟಿ ಮಾಡಿದ್ರಾ..? ಖಾತೆಗೆ 15 ಲಕ್ಷ ಹಣ ಹಾಕಿದ್ರಾ ಎಂದು ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ, ತಾಲ್ಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ

ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಡೀಸೆಲ್ – ಪೆಟ್ರೋಲ್ – ಗ್ಯಾಸ್ ಬೆಲೆ ಕಡಿಮೆ ಮಾಡ್ತೀವಿ ಅಂದ್ರು ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಅಂದ್ರು ಸೃಷ್ಟಿಸಿದ್ರಾ? ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು ಹಾಕಿದ್ರಾ? ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡುವುದಿಲ್ಲ – ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದರು.

ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ಮೋದಿ ಅವರು. ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲಾ ಧರ್ಮ, ಎಲ್ಲಾ ಜಾತಿ, ಎಲ್ಲಾ ವರ್ಗದವರಿಗೆ ಸೇರಿವೆ. ಸರ್ವರನ್ನೂ ಸಮಾನವಾಗಿ ಕಾಣುವ ಕಾರ್ಯಕ್ರಮಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ಜಾರಿ ಮಾಡುತ್ತಿದೆ. ಇವೆಲ್ಲವನ್ನೂ ನೀವುಗಳು ನಾಡಿನ ಜನರಿಗೆ ಸರಿಯಾಗಿ ಅರ್ಥ ಮಾಡಿಸಿ ಬಿಜೆಪಿ ಸುಳ್ಳುಗಳ ಎದುರು ಸತ್ಯದ ದಾಖಲೆಗಳನ್ನು ಮಂಡಿಸಬೇಕು ಎಂದರು.

ನಮ್ಮ ಸರ್ಕಾರದ ಗ್ಯಾರಂಟಿಗಳನ್ನು, ನಮ್ಮ ಸಾಧನೆಗಳನ್ನು ಬಿಜೆಪಿ ಸಾಧನೆ ಎಂದು ಹಳ್ಳಿ ಹಳ್ಳಿಗಳಲ್ಲಿ ಅವರು ನಿರಂತರವಾಗಿ, ನಿರ್ಲಜ್ಜರಾಗಿ ಸುಳ್ಳು ಹೇಳುತ್ತಿದ್ದಾರೆ. ನಾಡಿನ ಜನರ ಜೇಬಿಗೆ, ಮಹಿಳೆಯರ ಖಾತೆಗೆ ಹಣ ಹಾಕುತ್ತಿರುವುದು ನಮ್ಮ ಕಾಂಗ್ರೆಸ್ ಸರ್ಕಾರ. ನಮ್ಮ ನಾಡಿನ ಜನತೆಗೆ, ಮಹಿಳೆಯರಿಗೆ, ಯುವ ಸಮೂಹಕ್ಕೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುತ್ತಿರುವುದು ನಮ್ಮ ಕಾಂಗ್ರೆಸ್ ಸರ್ಕಾರ. ಆದರೆ ಬಿಜೆಪಿಯವರು ಮಾಮೂಲಿಯಂತೆ ಸುಳ್ಳು ಹೇಳುತ್ತಾ ನಮ್ಮ ಕಾರ್ಯಕ್ರಮಗಳನ್ನು ಅವರ ಕಾರ್ಯಕ್ರಮ ಎಂದು ಹೇಳಿಕೊಳ್ಳುವ ಅಪಾಯ ಇದೆ. ಈ ಸುಳ್ಳುಗಳನ್ನು ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಸಮರ್ಥವಾಗಿ ಎದುರಿಸಿ ಜನರಿಗೆ ಸತ್ಯ ತಿಳಿಸಬೇಕು. ಕರ್ನಾಟಕ ರಾಜ್ಯದಿಂದ ನಾವು 4 ಲಕ್ಷದ 50 ಸಾವಿರ ಕೋಟಿ ತೆರಿಗೆಯನ್ನು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕಟ್ಟುತ್ತೇವೆ. ಆದರೆ, ಕೇಂದ್ರವು ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಕೇವಲ 50 ಸಾವಿರ ಕೋಟಿ. ಈ ಅನ್ಯಾಯವನ್ನೇ ನ್ಯಾಯ ಎಂದು ಬಿಜೆಪಿ-ಜೆಡಿಎಸ್ ನವರು ಡ್ಯಾನ್ಸ್ ಮಾಡುತ್ತಿದ್ದಾರೆ. ಆದರೆ ನೀವುಗಳು ಬಿಜೆಪಿ-ಜೆಡಿಎಸ್ ನವರು ಅನ್ಯಾಯವನ್ನು ಬೆಂಬಲಿಸುತ್ತಿರುವುದನ್ನು ನಮ್ಮ ನಾಡಿನ ಜನರಿಗೆ ಅರ್ಥ ಮಾಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...