alex Certify ಬೊಲೆರೋ – ಸ್ಕೂಟಿ ಡಿಕ್ಕಿ: ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೊಲೆರೋ – ಸ್ಕೂಟಿ ಡಿಕ್ಕಿ: ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಹಿರೇಕಾನವಂಗಲ ಬಳಿ ಸ್ಕೂಟಿ, ಬೊಲೆರೋ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಿದ್ದಾಪುರ ಗ್ರಾಮದ ಅರ್ಜುನ್(35), ಶ್ವೇತಾ(33) ಮೃತಪಟ್ಟ ದಂಪತಿ ಎಂದು ಹೇಳಲಾಗಿದೆ. ವೇಗವಾಗಿ ಬಂದ ಬೊಲೆರೋ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಬೊಲೆರೋ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿಯಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...