alex Certify ಲಾರಿ –ಆಂಬುಲೆನ್ಸ್ ಡಿಕ್ಕಿ: ಅಪಘಾತದಲ್ಲಿ ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾರಿ –ಆಂಬುಲೆನ್ಸ್ ಡಿಕ್ಕಿ: ಅಪಘಾತದಲ್ಲಿ ಮೂವರ ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಆಂಬುಲೆನ್ಸ್ ಡಿಕ್ಕಿಯಾಗಿ ಮೂವರ ಸಾವು ಕಂಡ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ನಡೆದಿದೆ.

ಆಂಬುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್(17) ಹಾಗೂ ಚಾಲಕ ಸಾವು ಕಂಡಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಗುಜರಾತ್ ನ ಅಹಮದಾಬಾದ್ ನಿಂದ ತಮಿಳುನಾಡಿನ ತಿರುನೆಲ್ವೇಲಿಗೆ ಆಂಬುಲೆನ್ಸ್ ತೆರಳುವಾಗ ಅಪಘಾತ ಸಂಭವಿಸಿದೆ. ಮಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಅಪಘಾತ ನಡೆದಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...