
ಬೆಂಗಳೂರು: ಹಿಟ್ ಅಂಡ್ ರನ್ ನಿಂದಾಗಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಕೆಆರ್ ಮಾರ್ಕೆಟ್ ಫ್ಲೈ ಓವರ್ ಮೇಲೆ ನಡೆದಿದೆ.
ಆಟೋಗೆ ಡಿಕ್ಕಿ ಹೊಡೆದು ಇನೋವಾ ಕಾರ್ ಚಾಲಕ ಪರಾರಿಯಾಗಿದ್ದಾರೆ. ಇನ್ನೋವಾ ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದೆ. ಆಟೋ ಚಾಲಕ ವಸೀಂ ಪಾಷಾ ಕಾಲು ಮುರಿದಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಚಾಮರಾಜಪೇಟೆ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.