
ಭೋಪಾಲ್: ಲಾರಿ ಹಾಗೂ ಟಿಟಿ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಓರ್ವರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೆಶದ ಕಟನಿ ಬಳಿ ನಡೆದಿದೆ.
ಮೃತ ಮಹಿಳೆಯನ್ನು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿದ್ದ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲು ಟಿಟಿ ವಾಹನದಲ್ಲಿ ತೆರಳುತ್ತಿದ್ದರು. ಮಾರ್ಗ ಮಧ್ಯೆಯೇ ಲಾರಿ ಹಾಗೂ ಟಿಟಿ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಕಟನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳನ್ನು ಬೆಂಗಳೂರಿಗೆ ಸ್ಥಳಾಂತರ ಮಾಡುವಂತೆ ಕುಟುಂಬದವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.