
ಬೆಂಗಳೂರು: ಮಕರ ಸಂಕ್ರಾಂತಿ ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಯುವಕನೊಬ್ಬ ಬಲಿಯಾಗಿದ್ದಾನೆ. ಮರಕ್ಕೆ ಕಾರು ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಣಸವಾಡಿ ಬಳಿ ನಡೆದಿದೆ.
ಬಾಣಸವಾಡಿಯ ಸಿಎಂ ಆರ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ವೇಗವಾಗಿ ಬಂದ ಕಾರು ಮರಕ್ಕೆ ಡಿಕ್ಕಿಹೊಡೆದು ಬಳಿಕ ಕಾಂಪೌಂಡ್ ಗೆ ಗುದ್ದಿದೆ. ಕಾರಿನಲ್ಲಿದ್ದ 25 ವರ್ಷದ ಯುವಕ ಮೆಲ್ವಿನ್ ಜೋಸ್ವಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬಾನಸವಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.