
ಬಾಗಲಕೋಟೆ: ಟ್ಯಾಂಕರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಪ್ರದೀಪ ಗದಗಿನ ಮಠ(26), ಶಬ್ಬೀರ್(24) ಮೃತಪಟ್ಟವರು ಎಂದು ಹೇಳಲಾಗಿದೆ. ಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.