
ರಾಯಚೂರು: ರಾಯಚೂರು ತಾಲೂಕಿನ ಏಳನೇಮೈಲಿ ಬಳಿ ಅಪಘಾತ ಸಂಭವಿಸಿದೆ. ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೈಕ್ ಸವಾರರಾದ ಹನುಮೇಶ್(30), ಆಂಜನೇಯ(35) ಮೃತಪಟ್ಟವರು ಎಂದು ಹೇಳಲಾಗಿದೆ. ಇವರು ರಾಯಚೂರು ತಾಲೂಕಿನ ಹುಣಸೆಹಾಳ ಹೂಡ ಗ್ರಾಮದ ನಿವಾಸಿಗಳಾಗಿದ್ದಾರೆ. ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.