alex Certify BREAKING: ಅಪಘಾತದಲ್ಲಿ ಬೈಕ್ ಸವಾರ ಸಾವು, ರೊಚ್ಚಿಗೆದ್ದ ಸಾರ್ವಜನಿಕರಿಂದ ಚಾಲಕನಿಗೆ ಧರ್ಮದೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಪಘಾತದಲ್ಲಿ ಬೈಕ್ ಸವಾರ ಸಾವು, ರೊಚ್ಚಿಗೆದ್ದ ಸಾರ್ವಜನಿಕರಿಂದ ಚಾಲಕನಿಗೆ ಧರ್ಮದೇಟು

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನ ಸುಮ್ಮನಹಳ್ಳಿ ಬ್ರಿಡ್ಜ್ ಸಮೀಪ ಅಪಘಾತ ಸಂಭವಿಸಿದ್ದು, ತಲೆಗೆ ಪೆಟ್ಟು ಬಿದ್ದು ಬೈಕ್ ಸವಾರ ಪ್ರಮೋದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರೊಚ್ಚಿಗೆದ್ದ ಸಾರ್ವಜನಿಕರು ಚಾಲಕನಿಗೆ ಧರ್ಮದೇಟು ನೀಡಿದ್ದಾರೆ. ಹೊಯ್ಸಳ ಸಿಬ್ಬಂದಿ ಬಸ್ ಚಾಲಕನನ್ನು ರಕ್ಷಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಮಲ್ಲೇಶ್ವರಂ ಕೆಸಿ ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಬಿಎಂಟಿಸಿ ಬಸ್ ಜಪ್ತಿ ಮಾಡಿದ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...