ಚಿಕ್ಕಮಗಳೂರು: ಮರಕ್ಕೆ ಕಾರ್ ಡಿಕ್ಕಿಯಾಗಿ ದಂಪತಿ ಸಾವು ಕಂಡಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಬಳಿ ಘಟನೆ ನಡೆದಿದೆ.
ಅಪಘಾತದಲ್ಲಿ ಶ್ರೀನಿವಾಸ ಮತ್ತು ಶ್ವೇತಾ ಮೃತಪಟ್ಟವರು ಎಂದು ಹೇಳಲಾಗಿದೆ. ಬೆಂಗಳೂರಿನಿಂದ ಕಾರ್ ನಲ್ಲಿ ಕುಟುಂಬದವರು ಭದ್ರಾವತಿಗೆ ತೆರಳುತ್ತಿದ್ದರು. ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಬೆಟ್ಟದ ತಾವರೆಕೆರೆ ಬಳಿ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಮಕ್ಕಳಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.