
ಹಾವೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರ್ ಕಾಲುವೆಗೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಘಟನೆ ನಡೆದಿದೆ.
ವೇಗವಾಗಿ ಚಲಿಸುತ್ತಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಬಿದ್ದಿದೆ ಎನ್ನಲಾಗಿದೆ. ಪ್ರಕಾಶ್ ಬನ್ನಿಮಟ್ಟಿ, ಸಿದ್ದನಗೌಡ ಬಿಷ್ಟನವರ ಮೃತಪಟ್ಟವರು ಎಂದು ಹೇಳಲಾಗಿದೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.