
ಮಂಡ್ಯ: ಹಳ್ಳಕ್ಕೆ ಕಾರ್ ಉರುಳಿಬಿದ್ದ ಪರಿಣಾಮ ಮೂವರು ಸಜೀವ ದಹನವಾದ ಘಟನೆ ಮಂಡ್ಯ ಜಿಲ್ಲೆ ಹಲಗೂರು ಸಮೀಪ ನಡೆದಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಬಳಿ ದುರ್ಘಟನೆ ನಡೆದಿದ್ದು, ಕಾರ್ ನಲ್ಲಿದ್ದ ಮೂವರು ಸಜೀವದಹನವಾಗಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಕಾರ್ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.