ಚಿತ್ರದುರ್ಗ: ಟ್ಯಾಂಕರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮದಕರಿಪುರಿ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರು ಮೂಲದ ನಿರ್ಮಲಾ (55), ವಿನುತಾ (40) ಮೃತ ಮಹಿಳೆಯರು. ಅಪಘಾತದಲ್ಲಿ ಫಣಿರಾಜ್, ರಶ್ಮಿ, ಯಶಸ್ ಎಂಬ ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಿಂದ ಕಾರಿನಲ್ಲಿ ಹೊಸಪೇಟೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗದ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.