ಬೆಳಗಾವಿ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ತಾಯಿ ಸಾವನ್ನಪ್ಪಿದ್ದು, ಮಗನ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.
ರಾಯಭಾಗ ಪಟ್ಟಣದ ನಿವಾಸಿ ನಿರ್ಮಲಾ ಅವಟಿ(60) ಮೃತಪಟ್ಟವರು ಎಂದು ಹೇಳಲಾಗಿದೆ. ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರ್ ನಜ್ಜುಗುಜ್ಜಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುತ್ರ ನೇಮಿನಾಥ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಸ್ಥಳಕ್ಕೆ ಚಿಕ್ಕೋಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.