alex Certify ಭೀಕರ ಬೈಕ್ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಬೈಕ್ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ದುರ್ಮರಣ

ಕೊಡಗು : ಭೀಕರ ಬೈಕ್ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಭಾವನಾ (21) ಎಂದು ಗುರುತಿಸಲಾಗಿದೆ. ಈಕೆ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಬುಲೆಟ್ ಬೈಕ್ ಸ್ಕೂಟಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಭಾವನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸಂಬಂಧ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತ ವಿದ್ಯಾರ್ಥಿನಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...