ಬೆಂಗಳೂರು: ಬೆಂಗಳೂರಿನ ಆನಂದರಾವ್ ಸರ್ಕಲ್ ನಲ್ಲಿ ಹಿಟ್ ಅಂಡ್ ರನ್ ಗೆ ಅಪರಿಚಿತ ವ್ಯಕ್ತಿ ಬಲಿಯಾಗಿದ್ದಾರೆ. ಆನಂದ ರಾವ್ ಸರ್ಕಲ್ ಸಮೀಪದ ಫ್ಲೈ ಓವರ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸುಮಾರು 35 ರಿಂದ 40 ವರ್ಷದ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದು, 20 ಮೀಟರ್ ನಷ್ಟು ದೂರ ವ್ಯಕ್ತಿಯ ದೇಹವನ್ನು ವಾಹನ ಎಳೆದುಕೊಂಡು ಹೋಗಿದೆ. ರಾತ್ರಿ 9:30 ಸುಮಾರಿಗೆ ಘಟನೆ ನಡೆದಿದೆ. ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.