alex Certify ಬೈಕ್, ಆಟೋ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್, ಆಟೋ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಚಿತ್ರದುರ್ಗ: ಚಿತ್ರದುರ್ಗದ ದಂಡಿನ ಕುರುಬರಹಟ್ಟಿ ಸಮೀಪ ಬೈಕ್, ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆಟೋ ಚಾಲಕ ಬರ್ಕತ್, ಬೈಕ್ ಹಿಂಬದಿ ಕುಳಿತಿದ್ದ ಶಿಲ್ಪಾ ಮೃತಪಟ್ಟವರು ಎಂದು ಹೇಳಲಾಗಿದೆ. ಬೈಕ್ ಸವಾರನ ಕೈಗೆ ತೀವ್ರ ಪೆಟ್ಟಾಗಿದೆ. ಚಿತ್ರದುರ್ಗದಿಂದ ಚಳ್ಳಕೆರೆಗೆ ಹೊರಟಿದ್ದ ಆಟೋ ಓವರ್ ಟೇಕ್ ಮಾಡಲು ಹೋಗಿ ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...