
ಚಿತ್ರದುರ್ಗ: ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಮೃತರ ಪುತ್ರಿ, ಮೊಮ್ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರುದ್ರಮ್ಮನಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಹಿರಿಯಮ್ಮನಹಳ್ಳಿ ನಿವಾಸಿ ಓಬಯ್ಯ(52) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಓಬಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ತಾಯಿ, ಮಕ್ಕಳಿಬ್ಬರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.