alex Certify ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರ್ ಡಿಕ್ಕಿ: ಸವಾರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರ್ ಡಿಕ್ಕಿ: ಸವಾರ ಸಾವು

ಚಿತ್ರದುರ್ಗ: ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದ ಘಟನೆ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ಕನಗಲಿ ಗ್ರಾಮದ ಬಸವರಾಜಪ್ಪ(68) ಮೃತಪಟ್ಟ ಬೈಕ್ ಸವಾರ ಎಂದು ಹೇಳಲಾಗಿದೆ.

ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರಿಗೆ ಸೇರಿದ ಕಾರ್ ಡಿಕ್ಕಿಗಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಕಂದಾಯ ಸಚಿವರೊಂದಿಗೆ ಇಲಾಖೆಯ ಮುಖ್ಯ ಕಾರ್ಯದರ್ಶಿ ತೆರಳಿದ್ದರು. ಹಿಂದಿನಿಂದ ಚಾಲಕ ಕಾರ್ ತೆಗೆದುಕೊಂಡು ಹೋಗುವಾಗ ಬೈಕ್ ಗೆ ಡಿಕ್ಕಿಯಾಗಿದೆ. ಬೈಕ್ ಸವಾರ ಬಸವರಾಜಪ್ಪ ಕಾರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...