ಧಾರವಾಡ: ರಸ್ತೆ ಬದಿಯ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ತಾಯಿ, ಮಗು ಸಾವನ್ನಪ್ಪಿದ ಘಟನೆ ಬೇಲೂರು ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ.
ಧಾರವಾಡ ನಗರದ ಹೊರವಲಯದಲ್ಲಿರುವ ಬೇಲೂರು ಕೈಗಾರಿಕಾ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ. 20 ವರ್ಷದ ಸಂಗವ್ವ, ಒಂದು ವರ್ಷದ ಮಾಯಕ್ಕ ಮೃತಪಟ್ಟವರು. ಪತಿ ಜಕ್ಕಪ್ಪ ಜೊತೆ ಬೈಕ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೃತರು ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನಾಗರಾಳ ನಿವಾಸಿಗಳಾಗಿದ್ದಾರೆ. ಗರಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.