ಕೋಲಾರ: ಪರವನಹಳ್ಳಿ ಸಮೀಪ ಎರಡು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಪರವನಹಳ್ಳಿ ಬಳಿ ಅಪಘಾತ ನಡೆದಿದೆ.
ಬಂಗಾರಪೇಟೆ ತಾಲೂಕಿನ ತಂಗೇಡಿಮಿಟ್ಟೆಯ ಗೋಪಾಲ(25) ಹಾಗೂ ಪರವನಹಳ್ಳಿಯ ನವೀನ(26) ಮೃತಪಟ್ಟರು ಎಂದು ಹೇಳಲಾಗಿದೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.