
ತುಮಕೂರು: ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬಳಿ ನಡೆದಿದೆ.
ಪ್ರಭುಗೌಡ(28), ಆನಂದ(30) ಮೃತಪಟ್ಟವರು ಎಂದು ಹೇಳಲಾಗಿದೆ. ಸೇತುವೆ ಸಮೀಪ ನಿಂತಿದ್ದ ಮಿನಿ ಟೆಂಪೋಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.