alex Certify ಕಾರ್ ಪಲ್ಟಿಯಾಗಿ ಅಪಘಾತ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗಿದ್ದ ಬಿಜೆಪಿ ಮುಖಂಡ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಪಲ್ಟಿಯಾಗಿ ಅಪಘಾತ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗಿದ್ದ ಬಿಜೆಪಿ ಮುಖಂಡ ಸ್ಥಳದಲ್ಲೇ ಸಾವು

ಮೈಸೂರು: ಅಪಘಾತದಲ್ಲಿ ಮೈಸೂರು ಬಿಜೆಪಿ ಮುಖಂಡ ಸ್ವಾಮಿಗೌಡ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಊಟಿ ಸಮೀಪ ಕಾರ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ.

ಮೈಸೂರಿನ ಎನ್.ಆರ್. ಕ್ಷೇತ್ರದ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾಗಿರುವ ಸ್ವಾಮಿಗೌಡ ಅವರು ನಿನ್ನೆ ಸಂಜೆ ಸ್ನೇಹಿತರ ಜೊತೆಗೆ ಪ್ರವಾಸಕ್ಕೆ ತೆರಳಿದ್ದಾಗ ಕಾರ್ ಪಲ್ಟಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ತಮಿಳುನಾಡಿನ ಊಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...