
ಬೆಳಗಾವಿ: ಕಾರ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಅಣ್ಣ, ತಂಗಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನನದಿ ಗ್ರಾಮದ ಬಳಿ ಘಟನೆ ನಡೆದಿದೆ.
ಸದಲಗ ಗ್ರಾಮದ ಪ್ರಶಾಂತ್ ತುಳಸಿಕಟ್ಟಿ(22), ಪ್ರಿಯಾಂಕಾ ತುಳಸಿಕಟ್ಟಿ(20) ಮೃತಪಟ್ಟ ದುರ್ದೈವಿಗಳು. ಅಪಘಾತದಲ್ಲಿ ಅಣ್ಣ ಮತ್ತು ತಂಗಿ ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನು ಮಹಾರಾಷ್ಟ್ರದ ಕೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.