alex Certify ಕಾರ್ ಡಿಕ್ಕಿ: ಅಪಘಾತದಲ್ಲಿ ಗಾಯಗೊಂಡಿದ್ದ ಅಣ್ಣ, ತಂಗಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಡಿಕ್ಕಿ: ಅಪಘಾತದಲ್ಲಿ ಗಾಯಗೊಂಡಿದ್ದ ಅಣ್ಣ, ತಂಗಿ ಸಾವು

ಬೆಳಗಾವಿ: ಕಾರ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಅಣ್ಣ, ತಂಗಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನನದಿ ಗ್ರಾಮದ ಬಳಿ ಘಟನೆ ನಡೆದಿದೆ.

ಸದಲಗ ಗ್ರಾಮದ ಪ್ರಶಾಂತ್ ತುಳಸಿಕಟ್ಟಿ(22), ಪ್ರಿಯಾಂಕಾ ತುಳಸಿಕಟ್ಟಿ(20) ಮೃತಪಟ್ಟ ದುರ್ದೈವಿಗಳು. ಅಪಘಾತದಲ್ಲಿ ಅಣ್ಣ ಮತ್ತು ತಂಗಿ ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನು ಮಹಾರಾಷ್ಟ್ರದ ಕೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...