alex Certify ಬಸ್ -ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಪಾದ್ರಿ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ -ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಪಾದ್ರಿ ಸ್ಥಳದಲ್ಲೇ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ನ್ಯಾಮತಿ ತಾಲೂಕಿನ ಶಿವಮೊಗ್ಗ ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ ಸಮೀಪ ಕೆಎಸ್ಆರ್ಟಿಸಿ ಬಸ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಸಂತ ತೆರೇಸಾ ಚರ್ಚಿನ ಪಾದ್ರಿ ಅಂಥೋಣಿ ಪೀಟರ್(51) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರ್ ಚಾಲಕ ಸ್ಟೀಫನ್ ಅವರ ಕಾಲುಗಳಿಗೆ ಗಂಭೀರ ಪೆಟ್ಟಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂಥೋಣಿ ಮತ್ತು ಸ್ಟೀಫನ್ ಕಾರ್ ನಲ್ಲಿ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ವೇಳೆ ಶಿಕಾರಿಪುರ ಕಡೆಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರ್ ನಜ್ಜುಗುಜ್ಜಾಗಿದೆ. ನ್ಯಾಮತಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...