alex Certify BREAKING: ಬಸ್ ಟೈರ್ ಸ್ಪೋಟಗೊಂಡು ಆಟೋಗೆ ಡಿಕ್ಕಿ, ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಸ್ ಟೈರ್ ಸ್ಪೋಟಗೊಂಡು ಆಟೋಗೆ ಡಿಕ್ಕಿ, ಇಬ್ಬರ ಸಾವು

ಹೊಸಪೇಟೆ: ಸರ್ಕಾರಿ ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕುಪ್ಪಿನಕೆರಿ ಸಮೀಪ ಅಪಘಾತ ಸಂಭವಿಸಿದೆ. ಬಸ್ ಟೈರ್ ಸ್ಪೋಟಗೊಂಡು ಆಟೋಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಆಟೋ ನಜ್ಜುಗುಜ್ಜಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

ಕಾಲೇಜು ವಿದ್ಯಾರ್ಥಿನಿ ಪುಷ್ಪಲತಾ(20), ಮೀನಾಕ್ಷಿ(38) ಮೃತಪಟ್ಟವರು ಎನ್ನಲಾಗಿದೆ. ಆಟೋದಲ್ಲಿದ್ದ ರಮೇಶ, ಈರಣ್ಣ, ಅಭಿಷೇಕ್, ಸ್ವಾತಿ ಗಾಯಗೊಂಡಿದ್ದು, ಗಾಯಾಳುಗಳನ್ನು ಬಳ್ಳಾರಿ ಮತ್ತು ಕೂಡ್ಲಿಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...