
ಬೆಂಗಳೂರು: ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗ್ರಾಮದ ಬಳಿ ನಡೆದಿದೆ.
ಬೆಂಗಳೂರಿನ ಶಾಜಿಯಾಬಾನು(26), ಇಬ್ರಾಹಿಂ ಸಾಬ್(16) ಮೃತಪಟ್ಟವರು ಎಂದು ಹೇಳಲಾಗಿದೆ. ಡಾಬಾ ಸಮೀಪ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರ್ ಚಾಲಕನ ನಿಯಂತ್ರಣಕ್ಕೆ ಸಿಗದೇ ಡಿಕ್ಕಿ ಹೊಡೆದಿದೆ.
ಮುರುಗಮಲ್ಲಾ ದರ್ಗಾಕ್ಕೆ ಹೋಗಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಕಾರ್ ನಲ್ಲಿ ಒಂದೇ ಕುಟುಂಬದ 9 ಜನರು ಪ್ರಯಾಣಿಸುತ್ತಿದ್ದರು. ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.