alex Certify ಹಬ್ಬದ ಹೊತ್ತಲ್ಲೇ ದುರಂತ: ಡಿವೈಡರ್ ಗೆ ಕಾರ್ ಡಿಕ್ಕಿ, ಮೂವರು ಇಂಜಿನಿಯರ್ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬದ ಹೊತ್ತಲ್ಲೇ ದುರಂತ: ಡಿವೈಡರ್ ಗೆ ಕಾರ್ ಡಿಕ್ಕಿ, ಮೂವರು ಇಂಜಿನಿಯರ್ ಸಾವು

ಬೆಂಗಳೂರು: ತುಮಕೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಇಂಜಿನಿಯರ್ ಗಳು ಮೃತಪಟ್ಟಿದ್ದಾರೆ. ಮತ್ತಿಬ್ಬರು ಇಂಜಿನಿಯರ್ ಗಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಂಚೆಪಾಳ್ಯ ಬಳಿ ಘಟನೆ ನಡೆದಿದೆ. ಬೆಂಗಳೂರಿನ ಖಾಸಗಿ ಐಟಿ ಕಂಪನಿಯೊಂದರ ಟೆಕ್ಕಿಗಳಾಗಿರುವ ಇವರು ಪ್ರವಾಸಕ್ಕೆ ಹೋಗಿದ್ದು, ವಾಪಸ್ ಬರುವಾಗ ಘಟನೆ ನಡೆದಿದೆ. ಆಗಸ್ಟೀನ್ ನಿರೋಶ್, ವಿಘ್ನೇಶ್, ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶತ್ರುಘ್ನ, ಮಿಥುನ್ ಯಾದವ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಗವಾಗಿ ಕಾರ್ ಚಾಲನೆ ಮಾಡಿದ್ದು, ನಿಯಂತ್ರಣ ತಪ್ಪಿದ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...